ಪುರಿ: ಸೂರತ್, ಇಂದೋರ್ ಆಯಿತು. ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು ಪುರಿ ಕ್ಷೇತ್ರದಿಂದ ಸ್ವರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಪುರಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಪಕ್ಷ ಹಣ ನೀಡಿಲ್ಲ, ಆ ಕಾರಣಕ್ಕೆ ಹಣ ಕೊರತೆಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಸುಚರಿತ ಮೊಹಾಂತಿ ಅವರು ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದು, ನನಗೆ ಹಣಕಾಸಿನ ಕೊರತೆಯಿರುವ ಕಾರಣ ನನ್ನ ಪ್ರಚಾರಕ್ಕೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.