ಸುದ್ದಿ

ನಂದಿಬೆಟ್ಟಕ್ಕೆ ಪ್ರವಾಸಿಗರು ಕಡಿಮೆಯಾಗಲು ಇದೇ ಕಾರಣ ನೋಡಿ

 ಚಿಕ್ಕಬಳ್ಳಾಪುರ: ವಾರಾಂತ್ಯ ಹಾಗೂ ಬೇಸಿಗೆ ರಜೆ ಅವಧಿ ಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಬಿಸಿಲಿನಿಂದಾಗಿ ಜನರಿಲ್ಲದೆ ಭಣಗುಡುತ್ತಿವೆ.

ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿ ಸಿದರೆ ಈ ಬಾರಿ ತೀವ್ರ ಇಳಿಕೆಯಾಗಿದೆ. ರಾಜ್ಯದಲ್ಲಿ 38 ರಿಂದ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ನೆತ್ತಿ ಸುಡುವ ಬಿಸಿಲು ಪ್ರವಾಸಿ ತಾಣಗಳಲ್ಲಿ ಮೋಜು-ಮಸ್ತಿಗೆ ಬ್ರೇಕ್ ಹಾಕಿದೆ.

ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಬೆಂಗಳೂರಿಗೆ ಸಮೀಪದಲ್ಲಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿದ್ದರೂ ಬೆಂಗಳೂರಿಗರ ಜೊತೆ ಅವಿನಾಭಾವ ನಂಟು ಹೊಂದಿದೆ. ಇನ್ನು ಬೇಸಿಗೆಯ ರಜೆ ಬಂದರೆ ಸಾಕು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅವರ ಪೋಷಕರು ನಂದಿ ಗಿರಿಧಾಮಕ್ಕೆ ದಾಂಗುಡಿ ಇಡುತ್ತಿದ್ದರು. ಆದರೆ, ಈ ಬಾರಿ ಅತಿಯಾದ ಬಿಸಿಲು, ಉಷ್ಣವಿರುವ ಕಾರಣ ವಿದ್ಯಾರ್ಥಿ ಗಳು ಹಾಗೂ ಪೋಷಕರು ಮತ್ತು ಪ್ರವಾ ಸಿಗರು ಗಿರಿಧಾಮದತ್ತ ಮುಖ ಮಾಡಿಲ್ಲ.ಇದರಿಂದ ಗಿರಿಧಾಮ ಬಿಕೋ ಎನ್ನುತ್ತಿದೆ.

ಅವಲ ಗುರ್ತಿ ಬಳಿಯ ಈಲಾ ಫೌಂಡೇಷನ್ ನ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ನೋಡಲು ಸಹ ಸಾಕಷ್ಟು ಪ್ರವಾಸಿಗರು ಬರುತ್ತಿದರು. ಆದರೆ ಬಿಸಿಲ ಬೇಗೆಗೆ ಇತ್ತ ಸಹ ಪ್ರವಾಸಿಗರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ನಂದಿ ಗಿರಿಧಾಮ, ಚಂದ್ರ ಗಿರಿ, ಬ್ರಹ್ಮ ಗಿರಿ, ಕಳವಾರ ಬೆಟ್ಟ, ಹೇಮಗಿರಿ, ಆವುಲ ಬೆಟ್ಟ ಸೇರಿದಂತೆ ಅನೇಕ ತಾಣಗಳಿಗೂ ಪ್ರವಾಸಿಗರ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿ ರೆಸಾರ್ಟ್ಗಳು ಮತ್ತು ಹೋಟೆಲ್ ಗಳು ದೊಡ್ಡ ಉದ್ಯಮಗಳಾಗಿ ಬೆಳೆದಿವೆ. ಆದರೆ ಈ ಬಾರಿ ಬಿಸಿಲಿನ ತಾಪದಿಂದಾಗಿ ಹೋಟೆಲ್ ಉದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ.

 

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button