ಚಿಕ್ಕಮಗಳೂರು : ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸೋಷಿಯಲ್ ಮೀಡಿಯಾಗಳಲ್ಲಿ ಅಶ್ಲೀಲ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದಾನೆ ಎಂಬ ದೂರು ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೊವನ್ನು ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಸಂಸೆ ಮೂಲದ ಪ್ರಜ್ವಲ್ ಎಂಬಾತನ ಮೇಲೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಪೇಜ್‌ಗಳಲ್ಲಿ ಟ್ರೋಲ್ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.