ಸುದ್ದಿ

ಮೈಸೂರಿನಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ ಅಗರಬತ್ತಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗರಬತ್ತಿ ಕಾರ್ಖಾನೆಯ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

 

Comments (0)

Your email address will not be published. Required fields are marked *

Back to top button