Top Newsಧರ್ಮಫ್ರೀಡಂ ಟಿವಿ ವಿಶೇಷ

ಹಿಜಾಬ್ ನಿಷೇಧ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು ; ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತಾನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ.

ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ.
ಡ್ರೆಸ್, ಊಟ‌ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ ಎಂದರು.

ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು.
ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ.

ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದು ಸಿದ್ದರಾಮಯ್ಯ ಹೇಳಿದರು. ನಿನ್ನೆ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button