ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪ ಮೇರೆಗೆ ಶಾಸಕರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಇದೇ ತಿಂಗಳ 20ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಶಾಸಕ ಹರೀಶ್ ಪೂಂಜಾ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ್ದ ಆರೋಪ ಮೇರೆಗೆ ಕಳೆದ ಎರಡು ದಿನಗಳ ಹಿಂದೆ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿತ್ತು.