Tuesday, June 24, 2025
25.1 C
Bengaluru
Google search engine
LIVE
ಮನೆಕ್ರಿಕೆಟ್ಇಂದು KKR vs SRH ನಡುವೆ ಫೈನಲ್ ಪಂದ್ಯ

ಇಂದು KKR vs SRH ನಡುವೆ ಫೈನಲ್ ಪಂದ್ಯ

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್ (ಐಪಿಎಲ್‌) ಟೂರ್ನಿಯು ಅಂತಿಮ ಹಂತದಲ್ಲಿದೆ. ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಜಸ್ಥಾನ್‌ ರಾಯಲ್ಸ್ ತಂಡಗಳು ಮುಖಾಮುಖಿ ಸೆಣಸಲಿವೆ. ಆ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಉಭಯ ತಂಡಗಳು ಸಜ್ಜಾಗುತ್ತಿವೆ.

ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿಯೇ ಈ ಎರಡೂ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್ ಗೆಲುವು ಪಡೆದು ಫೈನಲ್‌ಗೆ ಲಗ್ಗೆ ಇಟ್ಟಿತ್ತು. ತದ ನಂತರ ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ ತಂಡ ಗೆದ್ದಿತ್ತು. ಆ ಮೂಲಕ ಎರಡನೇ ಕ್ವಾಲಿಫೈಯರ್‌ಗೆ ಪ್ರವೇಶ ಮಾಡಿತ್ತು. ಆದರೆ, ಎರಡನೇ ಕ್ವಾಲಿಫೈಯರ್‌ನಲ್ಲಿ ಆರ್‌ಆರ್‌ ವಿರುದ್ಧ ಗೆದ್ದು ಎಸ್‌ಆರ್‌ಎಚ್‌ ಫೈನಲ್‌ಗೆ ಪ್ರವೇಶ ಮಾಡಿತ್ತು.

ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 9 ವಿಕೆಟ್‌ಗಳ 175 ರನ್‌ಗಳನ್ನು ಕಲೆ ಹಾಕಿತ್ತು. ಟ್ರಾವಿಸ್‌ ಹೆಡ್‌ (34), ರಾಹುಲ್‌ ತ್ರಿಪಾಠಿ (37) ಹಾಗೂ ಹೆನ್ರಿಚ್‌ ಕ್ಲಾಸೆನ್‌ (50) ಅತ್ಯುತ್ತಮ ಬ್ಯಾಟ್‌ ಮಾಡಿದ್ದರು. ಬಳಿಕ ಗುರಿ ಹಿಂಬಾಲಿಸಿದ್ದ ರಾಜಸ್ಥಾನ್‌ ರಾಯಲ್ಸ್ ತಂಡ, 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 139 ರನ್‌ಗಳಿಗೆ ಸೀಮಿತವಾಗಿತ್ತು. ಆ ಮೂಲಕ 36 ರನ್‌ಗಳಿಂದ ಆರ್‌ಆರ್‌ ಸೋಲು ಅನುಭವಿಸಿತ್ತು.

ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್‌ ರಿಪೋರ್ಟ್‌

2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಫೈನಲ್‌ ಪಂದ್ಯ ನಡೆಯುವ ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್‌ ಸ್ಪಿನ್‌ ಸ್ನೇಹಿಯಾಗಿದೆ. ಆದರೆ, ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳು ಕೂಡ ಪ್ರಾಬಲ್ಯ ಸಾಧಿಸಬಹುದು. ಆದರೆ, ಈ ಪಿಚ್‌ನಲ್ಲಿ ರನ್‌ ಗಳಿಸುವುದು ಸ್ವಲ್ಪ ಕಠಿಣವಾದರೂ ಒಮ್ಮೆ ಇಲ್ಲಿನ ವಿಕೆಟ್‌ಗೆ ಹೊಂದಿಕೊಂಡರೆ ರನ್‌ ಗಳಿಸಬಹುದು. ಈ ಕ್ರೀಡಾಂಗಣದಲ್ಲಿ 170 ರಿಂದ 180 ರನ್‌ಗಳು ಉತ್ತಮವಾಗಿದೆ. ಟಾಸ್‌ ಗೆದ್ದ ತಂಡದ ನಾಯಕರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments