ಕ್ಯಾಲಿಫೋನಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ನಡೆದ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವಿದೇಶಾಂಗ ಸಚಿವ ಜೈ ಶಂಕರ್ ಒತ್ತಾಯಿಸಿದ್ದಾರೆ. ಖಾಲಿಸ್ಥಾನಿಗಳು ಈ ಕ್ರತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಹಿಂದೂ ಅಮೆರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್ ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ.