ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಚೀನಾದ ವಾಂಗ್ ಝಿಯಿ ವಿರುದ್ಧ ಸೋತು ನಿರಾಸೆ ಮೂಡಿಸಿದ್ದಾರೆ.
ಶನಿವಾರ ನಡೆದಿದ್ದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ವಿರುದ್ಧ ಸಿಂಧು 13-21, 21-16, 21-12 ಸೆಟ್‌ಗಳಿಂದ ಗೆಲುವು ಸಾಧಿಸಿದ್ದರು. ಇದಕ್ಕೂ ಮುನ್ನ ವಿಶ್ವದ 6ನೇ ಶ್ರೇಯಾಂಕಿತ ಆಟಗಾರ್ತಿಯಾದ ಚೀನಾದ ಹಾನ್ ಯೂ ಅವರನ್ನ ಕ್ವಾರ್ಟರ್ ಫೈನಲ್‌ನಲ್ಲಿ ಮಣಿಸಿದ್ದರು.
ಕಳೆದ 2 ವರ್ಷಗಳಿಂದ ಫಾರ್ಮ್ ಕಳೆದುಕೊಂಡಿದ್ದ ಸಿಂಧು ಯಾವುದೇ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಇದಕ್ಕೂ ಮುನ್ನ ಕಳೆದ ವರ್ಷ ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ಸ್‌ನಲ್ಲಿ ರನ್ನರ್ ಅಪ್ ಆಗಿದ್ದರು. 2022ರಲ್ಲಿ ಸಿಂಗಾಪುರ ಓಪನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೆ ಸೋಲಿನ ಅಭಿಯಾನ ಮುಂದುವರಿಸಿದ್ದಾರೆ.