Top Newsಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

ಚೆನ್ನೈ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು.

ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು. ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು.

ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.

Comments (0)

Your email address will not be published. Required fields are marked *

Back to top button