Friday, September 12, 2025
27.7 C
Bengaluru
Google search engine
LIVE
ಮನೆರಾಜ್ಯಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?

ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?

ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ಯಾವೆಲ್ಲ ಮೂಲಗಳಿಂದ ಬಂದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

ಈ ಬಾರಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಲ್ಲದೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇದರಿಂದ ಹರಕೆಯ ರೂಪದಲ್ಲಿ 2,58,44,097 ನಗದು 93 ಗ್ರಾಂ ಚಿನ್ನ ಹಾಗೂ 3.350 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ, ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶದ 4 ವಿದೇಶಿ ನೋಟುಗಳು‌, ಚಲಾವಣೆಯಲ್ಲಿ ಇಲ್ಲದ 2,000 ರೂಪಾಯಿ ಮುಖಬೆಲೆಯ 25 ನೋಟುಗಳು ಹುಂಡಿಯಲ್ಲಿ ಪತ್ತೆಯಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments