ರಾಜಕೀಯಸುದ್ದಿ

ಪ್ರಜ್ವಲ್ ಸೋಲುತ್ತಿದ್ದಂತೆ ಕಾರು ಚಾಲಕನನ್ನು ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ.

ಇದೀಗ ಅವರ ವಿರುದ್ಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಇದೀಗ ಫಲಿತಾಂಶ ಹೊರ ಬಿದ್ದಿದ್ದು ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಮಾಜಿ ಕಾರ್ ಚಾಲಕ ಕಾರ್ತಿಕ್ ಹಾಗೂ ಪುಟ್ಟರಾಜು ಅವರೊಂದಿಗೆ ಸಂಭ್ರಮಾಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button