ರಾಜಕೀಯಸುದ್ದಿ

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ

ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಶಿವಣ್ಣ ಪೋಸ್ಟ್ ಮಾಡಿದ್ದಾರೆ.

ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button