Thursday, November 20, 2025
22.5 C
Bengaluru
Google search engine
LIVE
ಮನೆಸುದ್ದಿತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಮಂತ್ರಿಗಿರಿ!

ತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಮಂತ್ರಿಗಿರಿ!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದ್ದು ಇಂದು ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿಗಿರಿ ಸಿಗಲಿದೆ.

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗದ್ದಿಗೌಡರ್, ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರ ನಡುವೆ ಸೋಮಣ್ಣಗೆ ಮಂತ್ರಿ ಖಾತೆ ಒಲಿದು ಬಂದಿದೆ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಗೆ ರಾಜ್ಯ ದರ್ಜೆ ಖಾತೆ ಸಿಗಲಿದೆ.

ಈ ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನುಳಿದಂತೆ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ. ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ದೊರೆಯುವ ಸಾಧ್ಯೆತೆಗಳಿವೆ. ಇನ್ನು ರಾಜ್ಯ ದರ್ಜೆ ಸಚಿವರಾಗಿ ಶೋಭಾ ಕರಂದ್ಲಾಜೆ ಮತ್ತು ತುಮಕೂರು ಸಂಸದ ಸೋಮಣ್ಣಗೆ ಅವಕಾಶ ಸಿಗುವ ನಿರೀಕ್ಷೆಗಳಿವೆ.

ಎನ್ ಡಿಎ ನಾಯಕರಿಗೆ ಮೋದಿ ಚಹಾಕೂಟ, ಸಂಭವನೀಯ ಸಚಿವರ ಪಟ್ಟಿ! ಇನ್ನು ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆಯೇ ಸೋಮಣ್ಣ ದೆಹಲಿಯಲ್ಲಿ ಬಿಎಸ್​​ ಯಡಿಯೂರಪ್ಪ ಭೇಟಿಗೆ ತೆರಳಿದ್ದಾರೆ. ದೆಹಲಿಯಲ್ಲಿ ತಮ್ಮ ಪುತ್ರ ವಿಜಯೇಂದ್ರ ನಿವಾಸದಲ್ಲಿ ಯಡಿಯೂರಪ್ಪ ತಂಗಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸೋಮಣ್ಣ, ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments