ಸುದ್ದಿ

ಕೇಂದ್ರದಲ್ಲಿ ಮಂತ್ರಿ ಸ್ಥಾನ ಇಲ್ಲ: ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಮುಂದುವರಿಕೆ

ನವದೆಹಲಿ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿಲ್ಲ. ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11:30ಕ್ಕೆ ಮೋದಿ ನೂತನ ಕ್ಯಾಬಿನೆಟ್‌ ಸದಸ್ಯರಿಗೆ ತಮ್ಮ ನಿವಾಸದಲ್ಲಿ ಚಹಾ ಕೂಟ ಆಯೋಜಿಸಿದ್ದರು. ಈ ಚಹಾಕೂಟಕ್ಕೆ ಯಾರಿಗೆಲ್ಲ ಕರೆ ಹೋಗಿದೆ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿರಲಿಲ್ಲ. ಹೀಗಾಗಿ ಅಣ್ಣಾಮಲೈ ಅವರಿಗೂ ಕರೆ ಹೋಗಿದೆ ಎಂಬ ವದಂತಿ ಹರಡಿತ್ತು. ಆದರೆ ಅಂತಿಮವಾಗಿ ಮೋದಿ ನಡೆಸಿದ ಸಭೆಯಲ್ಲಿ ಅಣ್ಣಾಮಲೈ ಭಾಗಿಯಾಗಿರಲಿಲ್ಲ.

2026 ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ ಪಕ್ಷ ಸಂಘಟಿಸುವ ಹೊಣೆಯನ್ನು ನೀಡಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಎಐಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ 3.6% ಮತ ಪಡೆದಿದ್ದರೆ ಈ ಬಾರಿ 10.72% ಮತ ಪಡೆದು ಮೂರನೇ ಸ್ಥಾನ ಪಡೆದಿದೆ. ಕೊಯಮತ್ತೂರಿನಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ ಡಿಎಂಕೆ ಅಭ್ಯರ್ಥಿ ವಿರುದ್ಧ ಸೋತಿದ್ದರು.

Comments (0)

Your email address will not be published. Required fields are marked *

Back to top button