Wednesday, April 30, 2025
30.3 C
Bengaluru
LIVE
ಮನೆರಾಜಕೀಯʻಶಕ್ತಿʼ ಯೋಜನೆ ರದ್ದುಗೊಳಿಸುವ ವದಂತಿ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ʻಶಕ್ತಿʼ ಯೋಜನೆ ರದ್ದುಗೊಳಿಸುವ ವದಂತಿ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ರದ್ದು ವದಂತಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಹೇಳಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments