ಸಿನಿಮಾಸುದ್ದಿ

‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?

ಬೆಂಗಳೂರು : ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್​ನಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಇದರಲ್ಲಿ ದರ್ಶನ್​ ಕೈವಾಡ ಕೂಡ ಇದೆ ಎನ್ನಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ದರ್ಶನ್ ಹಾಗೂ ಪವಿತ್ರಾ ಮಧ್ಯೆ ಆಪ್ತತೆ ಇದೆ. ಕಳೆದ 10 ವರ್ಷಗಳಿಂದ ಇವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಬೇರೆ ಬೇರೆ ಕಡೆಗಳಲ್ಲಿ ಸುತ್ತಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು. ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ. ಈ ಮಧ್ಯೆ ಹಲ್ಲೆ ವಿಚಾರ ಚರ್ಚೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ‘ನಿನ್ನಿಂದ ಹೀಗೆಲ್ಲಾ ಆಯಿತು’ ಎಂದು ದರ್ಶನ್ ಕೂಗಾಡಿದ್ದರು ಎಂದು ವರದಿ ಆಗಿದೆ. ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರ (ಜೂನ್ 10) ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

Comments (0)

Your email address will not be published. Required fields are marked *

Back to top button