ಸಿನಿಮಾಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಪರವಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ನಗರದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾಚಾರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆ, ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಚಿತ್ರದುರ್ಗದ ಮೃತ ರೇಣುಕಾ ಸ್ವಾಮಿ ಅವರನ್ನ ಕ್ರೂರಿಯಾಗಿ ಹಿಂಸಿಸಿ ಕೊಲೆ ಮಾಡಿರುವುದು ಅತ್ಯಂತ ಅಮಾನವ ಘಟನೆಯಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನ ನಟ ದರ್ಶನ್ ಮತ್ತು ಅವರ ಟೀಮ್ ಕೊಲೆ ಮಾಡಲಾಗಿತ್ತು. ಈ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ನಡೆದಿತ್ತು ಮಂಗಳವಾರ ಪೊಲೀಸರು ನಟ ದರ್ಶನ ಅವರನ್ನು ಬಂಧಿಸಿ ವಿಚಾರಣೆ ನಡೆಸಿದರು ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು ಬಳಿಕ ಆರೋಪಿಗಳ ವಿರುದ್ಧ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಆದೇಶಿಸಿತ್ತು.

ಚಿತ್ರದುರ್ಗ ನಗರದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮುಕ್ತಿ ಧಾಮ ರುದ್ರಭೂಮಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮೃತ ರೇಣುಕಾ ಸ್ವಾಮಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಸಾಯಬೇಕು. ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಕೊಲೆಯಾದ ರೇಣುಕಾಸ್ವಾಮಿ ತಾಯಿ ರತ್ನಮ್ಮ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ದರ್ಶನ್ ಎಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 15 ದಿನದೊಳಗೆ ದರ್ಶನ್ ಸಾಯಲಿ. ನಮ್ ವಂಶ ನಿರ್ವಂಶ ಮಾಡಿದ ದರ್ಶನ್‌ಗೆ ತಕ್ಕ ಶಾಸ್ತಿ ಆಗಲಿ. ನನ್ನ ಮಗನನ್ನು ಕೊಂದಂತೆ ಅವನನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಂಡ ಬರುತ್ತಾನೆ ಎಂದು ನನ್ನ ಸೊಸೆ ಕಾದು ಕುಳಿತಿದ್ದಳು. ಪಾಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪವಿತ್ರಾಗೌಡ ವಿರುದ್ಧ ರೇಣುಕಾಸ್ವಾಮಿ ತಾಯಿ ಹರಿಹಾಯ್ದಿದ್ದಾರೆ. ಮಾನವಿಯತೆ ಇಲ್ಲ ಮನುಷ್ಯತ್ವ ಇಲ್ಲ ಇವರೆಲ್ಲ ದೊಡ್ಡ ದೊಡ್ಡ ಸ್ಟಾರ್ ಗಳಂತೆ, ಕೊಲೆಗಡುಕ ಎಂದು ದರ್ಶನ್ ವಿರುದ್ಧ ತಂದೆ ಕಾಶಿನಾಥ ಶಿವನಗೌಡ ಆಕ್ರೋಶ ವ್ಯಕ್ತಪಡಿಸಿದ್ದರು.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಪವಿತ್ರಾಗೌಡ ಸೇರಿ ಒಟ್ಟು 17 ಜನರನ್ನು ಬಂಧಿಸಿದ್ದು, ವಿಚಾರಣೆ ಹಾಗೂ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button