ಬೆಂಗಳೂರು: ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಮೇಲೆ ನಿರ್ಬಂಧ ಹೇರುವಂತೆ ಸರ್ವ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟಿಸಿದರು.
ದರ್ಶನ್ ರಿಲೀಸ್ ಅವರನ್ನು ಸಿನಿಮಾಗಳನ್ನು ರಿಲೀಸ್ ಮಾಡಬಾರದು. ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಪತ್ರ ಮುಖೇನ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್. ಎಂ. ಸುರೇಶ್, ಮೊದಲ ಬಾರಿ ಇಂತಹ ಘಟನೆ ನಡೆದಿದೆ.
ಯಾರೇ ತಪ್ಪು ಮಾಡಿದ್ದರೂ ಅದು ತಪ್ಪೇ. ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ವಾಣಿಜ್ಯ ಮಂಡಳಿಯ ಮೇಲೂ ಜವಾಬ್ದಾರಿ ಇದೆ. ಕೆಲವೇ ದಿನಗಳಲ್ಲಿ ಕಲಾವಿದರ ಸಂಘದೊಂದಿಗೆ ಮಾತನಾಡಲಿದ್ದೇನೆ.
ಪೊಲೀಸರು ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


