ಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನಾ ನಾಗರಾಜ್

ಬೆಂಗಳೂರು: ಸ್ಯಾಂಡಲ್‌ವುಡ್ ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್  ಇದೀಗ ಚೊಚ್ಚಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಇದೀಗ ನಟಿ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ.

ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿವಿಧ ಭಂಗಿಯಲ್ಲಿ ನಟಿ ಮಿಲನಾ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಹಳದಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮಿಂಚಿದ್ದಾರೆ. ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ‌ಪೋಷಕರಾಗುತ್ತಿರುವ ‘ಲವ್‌ ಮಾಕ್ಟೈಲ್’ ಜೋಡಿಗೆ ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್‌ಗಳ ಮೂಲಕ ವಿಶ್ ಮಾಡಿದ್ದಾರೆ.

ಅಂದಹಾಗೆ, ಮಾರ್ಚ್ 8ರಂದು ತಾಯಿಯಾಗ್ತಿರುವ ಬಗ್ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದರು. ನಮಗೆ ಹಾರೈಸಿ ಎಂದು ಅಡಿಬರಹ ನೀಡಿ ಸಿಹಿಸುದ್ದಿ ತಿಳಿಸಿದ್ದರು.

2021ರಲ್ಲಿ ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ಹೊಸ ಬಾಳಿಗೆ ಕಾಲಿಟ್ಟರು. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button