ಸಿನಿಮಾಸುದ್ದಿ

ಜೈಲಿನಿಂದ ತೆಲುಗು ನಟಿ ಹೇಮಾ ರಿಲೀಸ್

ಬೆಂಗಳೂರು: ರೇವ್ ಪಾರ್ಟಿಯಲ್ಲಿ  ಭಾಗಿಯಾಗಿ ಜೈಲು ಪಾಲಾಗಿದ್ದ ನಟಿ ಹೇಮಾ  ಇದೀಗ ರಿಲೀಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಹೇಮಾ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಜೂನ್ 12ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಪ್ರಕ್ರಿಯೆ ವಿಳಂಬ ಆದ ಹಿನ್ನೆಲೆ ಇಂದು ಹೇಮಾರನ್ನು ಬಿಡುಗಡೆ ಮಾಡಲಾಯಿತು.

ಇತ್ತೀಚೆಗೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿದ್ದರು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು.‌

ಬಳಿಕ ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಜೂನ್ 14 ರ ವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.

ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೆಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button