Wednesday, April 30, 2025
30.3 C
Bengaluru
LIVE
ಮನೆಆರೋಗ್ಯದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

ದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ  ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್‌ ಸರೋವರದ  ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್  ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments