ರಾಜಕೀಯಸುದ್ದಿ

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್‌ ರೇವಣ್ಣ ಬಂಧನ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಹಾಸನದ ಸೆನ್‌ ಪೊಲೀಸ್‌ ಠಾಣೆಯಲ್ಲಿಯೇ  ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 , 342 ಹಾಗೂ 506  ಅಡಿಯಲ್ಲಿ ಕೇಸ್‌ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್‌ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button