Freedom TV

ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ

ಪ್ರತೀ ಭಾರಿ ನಿಮ್ಮ ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಇನ್ನೇನು ಶೂ ಹಾಕಲು ಹೊರಟಿದ್ದ ಯುವತಿ ಹಾವಿನ ಕಡಿತದಿಂದ ಕೂದಲೆಳೆ ಅಂತರದಿಂದ ಪಾರಾಗಿರುವ ಘ ಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಳೆಗೆ ಶೂ ಒಳಗಡೆ ಬೆಚ್ಚಗೆ ಮಲಗಿದ್ದ ಹಾವನ್ನು ಕಂಡು ಯುವತಿ ಬೆಚ್ಚಿ ಬಿದ್ದಿದ್ದಾಳೆ.

@MindhackD ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಜುಲೈ 3ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಶೂ ಧರಿಸುವ ಮೊದಲು ಜಾಗರೂಕರಾಗರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button