Top Newsಸುದ್ದಿ

24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿದೆ.

24 ಗಂಟೆಗಳಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ಸದ್ಯ ಜಲಾಶಯಕ್ಕೆ 45,500 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು 18.24 ಟಿಎಂಸಿಗೆ ಏರಿಕೆಯಾಗಿದೆ

ಒಳ ಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇದ್ದಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತುಂಗಭದ್ರಾ ಭದ್ರಾ ಜಲಾಶಯ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಇದೇ ರೀತಿ ನೀರಿನ ಒಳ ಹರಿವು ಬಂದರೆ ಈ ವಾರದಲ್ಲೇ ಜಲಾಶಯ ಬಹುತೇಕ ಭರ್ತಿಯಾಗಲಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button