Tuesday, June 24, 2025
25.1 C
Bengaluru
Google search engine
LIVE
ಮನೆಆರೋಗ್ಯಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ

ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಾಲಕನಿಗೆ ಇಲಿ ಜ್ವರ ಇರುವುದು ಪತ್ತೆಯಾಗಿದೆ.

ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments