Top Newsಕ್ರಿಕೆಟ್ಸುದ್ದಿ

Paris Olympics 2024; ಭಾರತಕ್ಕೆ ಮೊದಲ ಕಂಚಿನ ಪದಕ: ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ಮನು ಭಾಕರ್

33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button