Tuesday, January 27, 2026
20.2 C
Bengaluru
Google search engine
LIVE
ಮನೆಸಿನಿಮಾಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?

ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?

ಕರೀನಾ ಕಪೂರ್​​ಗೆ ಇಬ್ಬರು ಮಕ್ಕಳು. ಇವರಿಗೆ ಥೈಮೂರ್ ಹಾಗೂ ಜೆಹ್ ಹೆಸರಿನ ಮಕ್ಕಳಿದ್ದಾರೆ. ಇವರನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳಲಾಗಿದೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ ಕರೀನಾ ತಮ್ಮನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂಬುದನ್ನು ರಿವೀಲ್ ಮಾಡಿದ್ದಾರೆ.

ನಟಿ ಕರೀನಾ ಕಪೂರ್ ಮತ್ತು ನಟ ಸೈಫ್ ಅಲಿ ಖಾನ್ ದಂಪತಿಗೆ ತೈಮೂರ್ ಜನಿಸಿದ ನಂತರ ಅಭಿಮಾನಿಗಳು ಮತ್ತು ಪಾಪರಾಜಿಗಳು ಆತನನ್ನು ನೋಡಲು ಮುಗಿಬಿದ್ದರು. ಈಗ ಆತನ ಬಗ್ಗೆ ಅಷ್ಟು ಕ್ರೇಜ್ ಉಳಿದಿಲ್ಲ. ಈತನನ್ನು ಬೆಳೆಸಿದ್ದು ಲಲಿತಾ ಡಿಸಿಲ್ವಾ ಹೆಸರಿನ ದಾದಿ. ಲಲಿತಾ ಡಿಸಿಲ್ವಾ ಈಗ ಈ ದಂಪತಿಯ ಎರಡನೇ ಮಗ ಜೆಹ್​ನ ನೋಡಿಕೊಳ್ಳುತ್ತಿದ್ದಾರೆ. ಲಲಿತಾ ಡಿಸಿಲ್ವಾ ಯಾವಾಗಲೂ ತೈಮೂರ್ ಮತ್ತು ಜೆಹ್ ಜೊತೆ ಕಾಣಿಸಿಕೊಳ್ಳುತ್ತಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಕರೀನಾ ಕುಟುಂಬ ಮತ್ತು ತಾವು ಪಡೆಯುವ ಸಂಬಳದ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ ಕರೀನಾ ತಮ್ಮನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂಬುದನ್ನು ರಿವೀಲ್ ಮಾಡಿದ್ದಾರೆ. ‘ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ತುಂಬಾ ಸರಳ ವ್ಯಕ್ತಿಗಳು. ಕರೀನಾ-ಸೈಫ್ ಉಪಹಾರಕ್ಕಾಗಿ ಏನನ್ನು ತಿನ್ನುತ್ತಾರೋ ಅದನ್ನೇ ಸಿಬ್ಬಂದಿಗೂ ನೀಡುತ್ತಾರೆ. ಆಹಾರದಲ್ಲಿ ಏನೂ ವ್ಯತ್ಯಾಸವಿಲ್ಲ. ಕೆಲವೊಮ್ಮೆ ನಾವು ಒಟ್ಟಿಗೆ ಕುಳಿತು ಊಟ ಮಾಡುತ್ತೇವೆ. ನಾವು ಒಟ್ಟಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತೇವೆ’ ಎಂದಿದ್ದಾರೆ ಅವರು. ‘ಲಲಿತಾ ಡಿಸಿಲ್ವಾ ತಿಂಗಳಿಗೆ 2.5 ಲಕ್ಷ ಸಂಬಳ ಪಡೆಯುತ್ತಾರಾ?’ ಹೀಗೊಂದು ಪ್ರಶ್ನೆ ಕೇಳಲಾಯಿತು. ಈ ಬಗ್ಗೆ ಲಲಿತಾ ಡಿಸಿಲ್ವಾ ಅವರು ಸ್ಪಷ್ಟನೆ ನೀಡಿದ್ದಾರೆ. ‘2.5 ಲಕ್ಷ ರೂಪಾಯಿ? ಹಾಗೆ ಇದ್ದಿದ್ದರೆ ಚೆನ್ನಾಗಿರುತ್ತಿತ್ತು. ನಿಮ್ಮ ಬಾಯಲ್ಲಿ ಸಕ್ಕರೆ ಬೀಳಲಿ. ಇವೆಲ್ಲ ಕೇವಲ ವದಂತಿಗಳು’ ಎಂದಿದ್ದಾರೆ. ಲಲಿತಾ ಡಿಸಿಲ್ವಾ ಅವರು ಕಳೆದ ಹಲವಾರು ವರ್ಷಗಳಿಂದ ತೈಮೂರ್ ಮತ್ತು ಜೆಹ್ ಅವರನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಅನೇಕ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments