ಬಸವೇಶ್ವರನಗರ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ(Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಪರವಾಗಿ ಪೊಲೀಸ್ ಠಾಣೆಗೆ ಹೋಗಿದ್ದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್
ಪುನೀತ್ ಕೆರೆಹಳ್ಳಿ(Puneeth kerehalli)ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರವಾಗಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆನಡೆಸಲಾಗಿತ್ತು. ಈ ಹಿನ್ನೆಲೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.