Wednesday, April 30, 2025
24 C
Bengaluru
LIVE
ಮನೆಜಿಲ್ಲೆಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!

ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು 25 ಸಾವಿರ ರೂಪಾಯಿ ವಸೂಲಿ ಮಾಡಲು ಮುಂದಾಗಿದ್ದ, ಆರೋಪದ ಮೇಲೆ 35 ವರ್ಷದ ಆರೋಪಿ ಸೈಯ್ಯದ್ ಸರ್ಫರಾಜ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಜುಲೈ 24ರಂದು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೊಹಮ್ಮದ್ ಇರ್ಷಾದ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಮೊಹಮ್ಮದ್ ಇರ್ಷಾದ್‌ನೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ ಸಹ, ಆತನನ್ನ ಕಾನೂನುಬಾಹಿರವಾಗಿ ಪೊಲೀಸ್ ಕಸ್ಟಡಿಯಲ್ಲಿರಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಮಾನವ ಹಕ್ಕುಗಳ ಆಯೋಗದಲ್ಲಿ ಸರ್ಫರಾಜ್ ದೂರು ನೀಡಿದ್ದರು. ಬಳಿಕ ಪ್ರಕರಣ ಹಿಂಪಡೆಯಲು ಸುಮಾರು 50ಸಾವಿರ ರೂಪಾಯಿ ನೀಡುವಂತೆ ಪೊಲೀಸರ ಬಳಿಯೇ ಬೇಡಿಕೆಯಿಟ್ಟಿದ್ದ. ಅಲ್ಲದೇ ಜುಲೈ 29ರಂದು ಕ್ವೀನ್ಸ್ ರಸ್ತೆಯ ಬಳಿ ಪೊಲೀಸರಿಂದಲೇ 25 ಸಾವಿರ ರೂ ಪಡೆದುಕೊಂಡಿದ್ದ ಎನ್ನಲಾಗುತ್ತಿದೆ. ಬಳಿಕ ಆತನನ್ನು ವಶಕ್ಕೆ ಪೊಲಿಸರು ಪಡೆಯುವಷ್ಟರಲ್ಲಿ ಕಾಲ್ಕಿತ್ತಿದ್ದ ಎನ್ನಲಾಗಿದೆ‌. ಬಳಿಕ ತೀವ್ರ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಶಿವಾಜಿನಗರ ಠಾಣೆ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

 

 

ಖತರ್ನಾಕ್ ಆರೋಪಿಯ ಎಂಓ ಏನು ಗೊತ್ತಾ.?

ದೂರುದಾರನ ವೇಷಧಾರಿಯಾಗಿ ನಯವಾಗಿಯೇ ಪೊಲೀಸ್ ಠಾಣೆಗಳಿಗೆ ಹೋಗುತ್ತಿದ್ದ ಆರೋಪಿ, ಅಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳನ್ನ ಪರಿಚಯಿಸಿಕೊಳ್ಳುತ್ತಿದ್ದ. ತದನಂತರ ಮೆಲ್ಲಗೆ ಠಾಣೆಯಲ್ಲಿನ ಸೆಲ್ ಒಳಗೆ ಇರುವ ಆರೋಪಿಗಳನ್ನ ಪರಿಚಯ ಮಾಡಿಕೊಂಡು ಅವರ ಪೂರ್ವಪರಗಳನ್ನು ಅರಿತುಕೊಳ್ಳುತ್ತಿದ್ದನು, ನಂತರ ಅತನನ್ನು ಪೊಲೀಸರು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುತ್ತಿದ್ದ. ನಂತರ ಇದೇ ದೂರನ್ನು ಬಳಸಿಕೊಂಡು ಪೊಲೀಸ್ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ಹಿಂಪಡೆಯುವುದಾಗಿ ಪೊಲೀಸರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ ಆರೋಪಿ, ಪೂರ್ವ ವಿಭಾಗದ ಹಲವು ಪೊಲೀಸರಿಂದ ಹಣ ಸುಲಿಗೆ ಮಾಡಿರುವ ಶಂಕೆಯಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಿ ದೇವರಾಜ ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments