ರಾಜಕೀಯರಾಜ್ಯ

ಸಿದ್ದರಾಮಯ್ಯ ವಿರುದ್ಧ ಇಂದೇ ಕ್ರಮ ಕೈಗೊಳ್ತಾರಾ ಗೌರ್ನರ್?

ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣ ಸಂಬಂಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರ ಟಿ.ಜೆ.ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಸಂಬಂಧ ನಿಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವ ಬಗ್ಗೆ ನೋಟಿಸ್ ಅನ್ನೂ ನೀಡಿದ್ದರು. ದೂರು ಕೊಟ್ಟಿದ್ದ ಟಿ.ಜೆ.ಅಬ್ರಹಾಂ ಅವರನ್ನು ಕರೆಸಿ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಸಚಿವ ಸಂಪುಟ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಇಂದೇ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಡುವ ಕುರಿತು ಇಂದು ರಾಜ್ಯಪಾಲರು ಚಿಂತನೆ ನಡೆಸಲಿದ್ದಾರೆ.  ಪ್ರಾಸಿಕ್ಯೂಷನ್ ಅವಕಾಶ ಕೊಟ್ರೆ ರಾಜ್ಯ ಸರ್ಕಾರ ಮುಂದೇನು ಮಾಡಬಹುದು ಎಂಬುದರ ಬಗ್ಗೆ ರಾಜ್ಯಪಾಲರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲು ಮುಂದಾಗಿದ್ದಾರೆ.  ಇಂದು ರಾಜಭವನಕ್ಕೆ  ಕಾನೂನು ತಜ್ಞರನ್ನ ಕರೆಸಿ ಮಾತನಾಡುವ ಸಾಧ್ಯತೆ ಇದೆ.  ಎರಡು ಮೂರು ದಿನಗಳಲ್ಲಿ ಪ್ರಾಸಿಕ್ಯೂಷನ್ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

Comments (0)

Your email address will not be published. Required fields are marked *

Back to top button