ಮನರಂಜನೆಸಿನಿಮಾ

ಬೆಳ್ಳಂಬೆಳಗ್ಗೆ ನಾಗಚೈತನ್ಯ-ಶೋಭಿತಾ ನಿಶ್ಚಿತಾರ್ಥ ಮುಗಿಸಿ ಫೋಟೋ ಹಂಚಿಕೊಂಡ ನಟ ನಾಗಾರ್ಜುನ!

ಲುಗು ಸಿನಿಮಾ ಚಿತ್ರರಂಗದ ಅಕ್ಕಿನೇನಿ ನಾಗಾರ್ಜುನ ಕುಟುಂಬದಲ್ಲಿ ಇಂದು ಬೆಳ್ಳಂಬೆಳಗ್ಗೆ (2024ರ ಆ.8ರಂದು) ನಟ ನಾಗ ಚೈತನ್ಯ- ನಟಿ ಶೋಭಿತಾ ಧೂಲಿಪಾಲ ಅವರ ನಿಶ್ಚಿತಾರ್ಥವನ್ನು ನೆರವೇರಿಸಿ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ಈ ಕುರಿತು ನಟ ನಾಗಾರ್ಜುನ ಅಕ್ಕಿನೇನಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಇಂದು ಬೆಳಿಗ್ಗೆ 9:42 ಕ್ಕೆ ನಡೆದ ಶೋಭಿತಾ ಧೂಲಿಪಾಲ ಅವರೊಂದಿಗೆ ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಮಾಡಿರುವುದನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಸಂತದಿಂದಿರುವ ದಂಪತಿಗಳಿಗೆ ಅಭಿನಂದನೆಗಳು. ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಆಶೀರ್ವದಿಸಲಿ! ಎಂದು ಆಶೀರ್ವಾದ ಮಾಡಿದ್ದಾರೆ.

ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಅವರ ಕುರಿತ ವದಂತಿಗಳು ಕೆಲ ದಿನಗಳಿಂದ ನಿಜವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಇವರಿಬ್ಬರು ಗಂಭೀರ ಸಂಬಂಧದಲ್ಲಿದ್ದಾರೆ ಎಂದು ವ್ಯಾಪಕವಾಗಿ ವರದಿಯಾಗಿತ್ತು. ಇದರ ಬೆನ್ನಲ್ಲಿಯೇ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ ಯಾರೊಬ್ಬರೂ ಈ ಬಗ್ಗೆ ಮೌನ ಮುರಿದು ಸ್ಪಷ್ಟನೆ ನೀಡಿರಲಿಲ್ಲ. ಈಗ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸುದ್ದಿಯನ್ನು ಇಬ್ಬರೂ ತಾರಾ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ನಿಜ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button