Top Newsಸುದ್ದಿ

ನಾಳೆ ನಗರದಾದ್ಯಂತ ಮಾಂಸ ಮಾರಾಟ ನಿಷೇಧ-ಬಿಬಿಎಂಪಿ ಎಚ್ಚರಿಕೆ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

ನಗರದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನು ಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

Comments (0)

Your email address will not be published. Required fields are marked *

Back to top button