Thursday, November 20, 2025
21.7 C
Bengaluru
Google search engine
LIVE
ಮನೆರಾಜಕೀಯದರ್ಶನ್‌ಗೆ ರಾಜಾತಿಥ್ಯ :ಕೆರಳಿದ ಸಿದ್ದು, ಅಫೀಸರ್ಸ್​ ಗಡಗಡ..!

ದರ್ಶನ್‌ಗೆ ರಾಜಾತಿಥ್ಯ :ಕೆರಳಿದ ಸಿದ್ದು, ಅಫೀಸರ್ಸ್​ ಗಡಗಡ..!

ಬೆಳಗಾವಿ, ಆಗಸ್ಟ್‌ 26: ದರ್ಶನ್‌ಗೆ ರಾಜಾತಿಥ್ಯ ನೀಡಿರುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ.  ಸಿಎಂ ಸಿಟ್ಟಿಂದ ತಪ್ಪಿತಸ್ಥ ಅಧಿಕಾರಿಗಳು  ಭಯ ಬಿದ್ದಿದ್ದಾರೆ.  ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments