
ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ ಕೆ.ಬಳ್ಳಕಟ್ಟೆ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಆಂಬುಲೆನ್ಸ್ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಆಂಬುಲೆನ್ಸ್ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (36) ಸಾವನ್ನಪ್ಪಿದ್ದಾರೆ. ಅಲ್ಲದೇ ಆಂಬುಲೆನ್ಸ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




