ಸುದ್ದಿ

ರೇಪ್​ ಕೇಸ್​ ಬಗೆಗಿನ ಕಾನೂನಿಗೆ ತಿದ್ದುಪಡಿ-ದೀದಿ

West Bengal CM Mamata Banerjee

ಕೋಲ್ಕತ್ತಾ: ಅತ್ಯಾಚಾರ ಪ್ರಕರಣಗಳ ಬಗ್ಗೆ ತಮ್ಮ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಪರಾಧಿಗಳಿಗೆ ಮರಣದಂಡನೆ ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ತಿದ್ದುಪಡಿ ಮಾಡಲು ಮುಂದಿನ ವಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಲಾಗುವುದು ಎಂದು ಬುಧವಾರ ಹೇಳಿದ್ದಾರೆ.

ಒಂದು ವೇಳೆ ರಾಜ್ಯಪಾಲರು ತಿದ್ದುಪಡಿ ಮಸೂದೆಗೆ West Bengal CM Mamata Banerjeeಒಪ್ಪಿಗೆ ನೀಡಲು ವಿಳಂಬ ಮಾಡಿದರೆ ಅಥವಾ ರಾಷ್ಟ್ರಪತಿಗಳಿಗೆ ರವಾನಿಸಿದರೆ ರಾಜಭವನದ ಹೊರಗೆ ಧರಣಿ ನಡೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಟಿಎಂಸಿ ಶನಿವಾರದಿಂದ ಪ್ರತಿಭಟನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಮುಂದಿನ ವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾವು ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುತ್ತೇವೆ. ನಂತರ ನಾವು ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸುತ್ತೇವೆ. ಅವರು ಮಸೂದೆಗೆ ಒಪ್ಪಿಗೆ ನೀಡದಿದ್ದರೆ ನಾವು ರಾಜಭವನದ ಹೊರಗೆ ಧರಣಿ ಮಾಡುತ್ತೇವೆ” ಎಂದು ದೀದಿ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button