ಮುಡಾ ಹಗರಣ ದಿನಬೆಳಗಾದರೆ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆಗೀಡಾಗುತ್ತಲೇ ಇದೆ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಷ್ಟ್ರಪತಿಗಳ ಎಂಟ್ರಿಯೂ ಆಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಷ್ಟ್ರಪತಿಗಳ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲೇನಿದೆ ಎಂಬ ವಿವರ ಇಲ್ಲಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್​​ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಎಂಟ್ರಿಯಾದಂತಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.ಈ ವಿಚಾರದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ. ಇದರೊಂದಿಗೆ ಪ್ರಾಸಿಕ್ಯೂಷನ್ ವಿಚಾರ ರಾಷ್ಟ್ರಪತಿ ಭವನದ ಅಂಗಳಕ್ಕೂ ತಲುಪಿದೆ.

ರಾಷ್ಟ್ರಪತಿಗಳ ಕಾರ್ಯದರ್ಶಿ ಪತ್ರದಲ್ಲೇನಿದೆ?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ,ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ…

Leave a Reply

Your email address will not be published. Required fields are marked *

Verified by MonsterInsights