Thursday, November 20, 2025
24.6 C
Bengaluru
Google search engine
LIVE
ಮನೆ#Exclusive NewsTop Newsಕಲಬುರಗಿಯಲ್ಲಿ ಭಾರಿ ಮಳೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಕಲಬುರಗಿಯಲ್ಲಿ ಭಾರಿ ಮಳೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮೂರು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಲಬುರಗಿ ಜಿಲ್ಲಾಡಳಿತ ರಜೆ ಘೋಷಿಸಿದೆ.

ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವೆಡೆ ಗ್ರಾಮಗಳಿಗೂ ನೀರು ನುಗ್ಗಿದೆ. ರಸ್ತೆ ಸಂಪರ್ಕ ಸಹ ಹದಗೆಟ್ಟಿದ್ದು ಮಳೆಯ ಅವಾಂತರ ಜನರನ್ನ ಹೈರಾಣಾಗುವಂತೆ ಮಾಡಿದೆ. ಇದೇ ವೇಳೆ ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು, ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments