Thursday, May 1, 2025
30.3 C
Bengaluru
LIVE
ಮನೆ#Exclusive NewsTop Newsನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ನಗರ ಪೊಲೀಸ್ ಆಯುಕ್ತರಿಂದ CFSL ಬಗ್ಗೆ...

ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ನಗರ ಪೊಲೀಸ್ ಆಯುಕ್ತರಿಂದ CFSL ಬಗ್ಗೆ ಮಾತು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಭದ್ರವಾದ ಬಾಕ್ಸ್ ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಪ್ರಕರಣದ ಆಳವಾದ ತನಿಖೆ ನಡೆಸಿ ಬಲವಾದ ಆರೋಪಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಸುದ್ದಿಗಾರರಿಗೆ ಇಂದು ತಿಳಿಸಿದ್ದಾರೆ.

ಚಾರ್ಜ್‌ಶೀಟ್ 231 ಸಾಕ್ಷಿ ಹೇಳಿಕೆಗಳು, ತಾಂತ್ರಿಕ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಒಳಗೊಂಡಿದೆ, ಇದೊಂದು ಬೃಹತ್ ಮಟ್ಟದ ತನಿಖೆಯಾಗಿದೆ. 3, 991 ಪುಟಗಳ ಆರೋಪಪಟ್ಟಿಯನ್ನು (ಏಳು ಸಂಪುಟಗಳು ಮತ್ತು 10 ಕಡತಗಳೊಂದಿಗೆ) 24 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಆಯುಕ್ತರು ಸುದ್ದಿಗಾರರಿಗೆ ವಿವರಿಸಿದರು.

ಈ ಪ್ರಕರಣದಲ್ಲಿ 17 ಮಂದಿಯನ್ನು ಬಂಧಿಸಿ ಅವರೀಗ ನ್ಯಾಯಾಂಗ ಬಂಧನದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದಾರೆ. ಮೂವರು ಪ್ರತ್ಯಕ್ಷ ಸಾಕ್ಷಿಗಳಿದ್ದಾರೆ; 27 ಸಾಕ್ಷಿಗಳು ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಇತರ ಸಾಕ್ಷಿಗಳು ಪೊಲೀಸರ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ ಎಂದರು.

ಸಿಎಫ್‌ಎಸ್‌ಎಲ್‌ ವರದಿ ಬಂದಿಲ್ಲ: ನಾವು ತನಿಖೆಗೆ ಸಂಬಂಧಿಸಿದ ಹಲವಾರು ವಸ್ತುಗಳನ್ನು ಇಲ್ಲಿಯ ಎಫ್‌ಎಸ್‌ಎಲ್ (ಫೊರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ) ಮತ್ತು ಸಿಎಫ್‌ಎಸ್‌ಎಲ್ (ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ, ಹೈದರಾಬಾದ್) ಗೆ ಕಳುಹಿಸಿದ್ದೇವೆ. ಫಾರೆನ್ಸಿಕ್ ವರದಿ ಬಂದಿದೆ. ಸಿಎಫ್‌ಎಸ್‌ಎಲ್‌ನಿಂದ ಕೆಲವು ವರದಿಗಳು ಇನ್ನೂ ಬರಬೇಕಿದೆ ಎಂದರು.

ಪ್ರಕರಣದ ಸಾಕ್ಷಿಗಳಲ್ಲಿ 56 ಮಂದಿ ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ದಯಾನಂದ ಹೇಳಿದರು. ತನಿಖಾಧಿಕಾರಿಗಳು ಸಂಗ್ರಹಿಸಿದ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ 17 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಗ್ರಹಿಸಿದ ಸಾಕ್ಷ್ಯವನ್ನು ಸೆಕ್ಷನ್ 173 (ಸಿಆರ್‌ಪಿಸಿ (ಅಪರಾಧ ಪ್ರಕ್ರಿಯಾ ಸಂಹಿತೆ)ರ ಅಡಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ, ಹೆಚ್ಚಿನ ತನಿಖೆಗಾಗಿ ತನಿಖಾ ಸಂಸ್ಥೆಗೆ ಅನಿಯಂತ್ರಿತ ಹಕ್ಕನ್ನು ನೀಡುತ್ತದೆ.

ಪ್ರಕರಣದ ಆರೋಪಿಗಳಾದ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರ 15 ಮಂದಿ ಪ್ರಸ್ತುತ ರಾಜ್ಯದ ವಿವಿಧ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ನಟನ ಅಭಿಮಾನಿಯಾದ 33 ವರ್ಷದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಇದು ದರ್ಶನ್ ಅವರನ್ನು ವಿಪರೀತ ಸಿಟ್ಟಿಗೆ ಎಡೆಮಾಡಿಕೊಟ್ಟು ಕೊಲೆಗೆ ಕಾರಣವಾಯಿತು ಎನ್ನಲಾಗಿದೆ.

ನಂಬರ್ ಒನ್ ಆರೋಪಿಯಾಗಿರುವ ಪವಿತ್ರಾ ಗೌಡ, ರೇಣುಕಾಸ್ವಾಮಿ ಹತ್ಯೆಗೆ ಪ್ರಮುಖ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಇತರ ಆರೋಪಿಗಳಿಗೆ ಪ್ರಚೋದನೆ ನೀಡಿ, ಅವರೊಂದಿಗೆ ಸಂಚು ರೂಪಿಸಿ ಅಪರಾಧದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments