#Exclusive NewsTop News
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸದ್ಯಕ್ಕೆ ಸಂಪೂರ್ಣ ರಿಲೀಫ್ ದೊರೆಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ಸಿಬಿಐ ತನಿಖೆ ರದ್ದುಗೊಳಿಸಿದ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಕೆಲವೇ ದಿನಗಳ ಹಿಂದೆ ವಜಾಗೊಳಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.




