#Exclusive NewsTop News

ಮುಡಾ ಹಗರಣ: ಅಕ್ರಮ ಎಸಗಿದ ಅಧಿಕಾರಿಗಳ ರಕ್ಷಣೆ ವಿರುದ್ಧ ಬಿಜೆಪಿ ಒಬಿಸಿ ಮೋರ್ಚಾ ಕಾನೂನು ಹೋರಾಟದ ಎಚ್ಚರಿಕೆ

ಮುಡಾದಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಇತರ ಮೂವರು ಅಧಿಕಾರಿಗಳಿಗೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್ ರಘು ಕೌಟಿಲ್ಯ ಪತ್ರ ಬರೆದಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿರುವ ಹಗರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದೆ. ನಿಯಮಬಾಹಿರವಾಗಿ ಮುಖ್ಯಮಂತ್ರಿಗಳಿಗೆ 14 ನಿವೇಶನಗಳನ್ನು ಬಳುವಳಿಯಾಗಿ ನೀಡಿದ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡಲಿದ್ದೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್ ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button