
ಬೀದರ್: ಬೈಕ್ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ನಿರ್ಣಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಘಟನೆ ನಡೆದಿದೆ.

ಚಿಟ್ಟಗುಪ್ಪ ತಾಲೂಕಿನ ಉಡುಬಾಳು ಗ್ರಾಮದ ಸತೀಶ್ ಶಿವಕುಮಾರ್ ಗಂಭೀರ ಗಾಯಗೊಂಡಿದ್ದು, ಮನ್ನಾಏಖೇಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆ.4 ರಂದು ಈ ಅಪಘಾತ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಕುರಿತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




