ಬೀದರ್ :ಸಾಲಕ್ಕೆ ಹೆದರಿ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.ಬೀದರ್ ನ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ. ಮಹಮ್ಮದ್ ಸೋಹೆಲ್ ಕಾರ್ಯನಿರ್ವಹಿಸಿದರು. ಎಂಬಿಬಿಎಸ್ ಅಧ್ಯಯನಕ್ಕಾಗಿ ವಿವಿಧ ಫೈನಾನ್ಸ್ ನಲ್ಲಿ ಲಕ್ಷಾಂತರ ಸಾಲ ಮಾಡಿದ್ದ ಸೋಹೆಲ್.ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಸಾವಿಗಿಡಾಗಿದ್ದಾನೆ.ಕೊಳೆತ ಸ್ಥಿತಿಯಲ್ಲಿ ಡಾ. ಮಹಮ್ಮದ್ ಸೊಹೆಲ್ ಶವ ಪತ್ತೆಯಾಗಿದೆ.ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.