Friday, September 12, 2025
21 C
Bengaluru
Google search engine
LIVE
ಮನೆ#Exclusive NewsTop Newsದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್‌ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!

ದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್‌ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!

ನವದೆಹಲಿ: ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಈಗಾಗಲೇ ರಾಂಚಿಯಲ್ಲಿ ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶ ಸಂಪರ್ಕಿಸುವ 6 ವಂದೇ ಭಾರತ್ ರೈಲುಗಳಿಗೆ ವರ್ಚುವಲ್‌ ಚಾಲನೆ ನೀಡಿದ್ದಾರೆ.

ಇದರೊಂದಿಗೆ ದೇಶದ ಮೊದಲ ʻವಂದೇ ಮೆಟ್ರೋʼ ರೈಲು ಸೇವೆಗೆ ಗುಜರಾತ್‌ನಲ್ಲಿ ಹಸಿರು ನಿಶಾನೆ ತೋರಲಿದ್ದಾರೆ. ಪಶ್ಚಿಮ ರೈಲ್ವೆಯ ಅಹಮದಾಬಾದ್ ವಿಭಾಗವು ಈ ವಾರದ ಆರಂಭದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಚಾಲನೆ ನಡೆಸಿತ್ತು.

ಇದರ ಉಪಯೋಗ ಏನು?
* ವಂದೇ ಮೆಟ್ರೋ ಸೇವೆಯು ಭುಜ್ (ಕಚ್ ಜಿಲ್ಲೆಯಲ್ಲಿದೆ) ನಿಂದ ಅಹಮದಾಬಾದ್‌ನೊಂದಿಗೆ ಸಂಪರ್ಕಿಸುತ್ತದೆ.
* 360 ಕಿಮೀ ದೂರವನ್ನ 5 ಗಂಟೆ 45 ನಿಮಿಷಗಳಲ್ಲಿ ಕ್ರಮಿಸಲಿದೆ.
* ಈ ರೈಲು ಗರಿಷ್ಠ 110 ಕಿಮೀ ವೇಗದಲ್ಲಿ ಚಲಿಸುತ್ತದೆ. ಅಂಜಾರ್, ಗಾಂಧಿಧಾಮ್, ಭಚೌ, ಸಮಖಿಯಾಲಿ, ಹಲ್ವಾಡ್, ಧ್ರಂಗಾಧ್ರಾ, ವಿರಾಮ್ಗಮ್, ಚಂದ್ಲೋಡಿಯಾ, ಸಬರಮತಿ ಮತ್ತು ಕಲುಪುರ್ (ಅಹಮದಾಬಾದ್ ನಿಲ್ದಾಣ) ನಿಲ್ದಾಣಗಳಲ್ಲಿ ಸ್ಟಾಪ್‌ ಇರಲಿದೆ.
* ಈ ರೈಲು ವಾರದಲ್ಲಿ 6 ದಿನಗಳು ಕಾರ್ಯನಿರ್ವಹಿಸುತ್ತದೆ. ಶನಿವಾರ ಭುಜ್ ನಿಂದ ಭಾನುವಾರ ಅಹಮದಾಬಾದ್‌ನಿಂದ ಸೇವೆ ಸ್ಥಗಿತಗೊಳಿಸಲಾಗುತ್ತದೆ.

ವಂದೇ ಮೆಟ್ರೋ ವಿಶೇಷತೆಗಳೇನು?
* 1,150 ಹಾಸನಗಳನ್ನು ಹೊಂದಿರುವುದಲ್ಲದೇ 2,058 ನಿಂತು ಪ್ರಯಾಣಿಸಬಹುದಾಗಿದೆ. ಕುಳಿತುಕೊಳ್ಳಲು ಮೃದು ಸೋಫಾಗಳನ್ನ ಅಳವಡಿಸಲಾಗಿದೆ.
* ಮೆಟ್ರೋ ಸಂಪೂರ್ಣ ಹವಾನಿಯಂತ್ರಿತವಾಗಿದೆ (ಎ.ಸಿ.)
* ಇದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನೇ ಹೋಲುತ್ತದೆಯಾದರೂ, ಉಪನಗರದ ಮೆಟ್ರೋ ವ್ಯವಸ್ಥೆಗಳ ವೈಶಿಷ್ಟ್ಯತೆಯನ್ನು ಒಳಗೊಂಡಿದೆ.
* ಎರಡೂ ತುದಿಗಳಲ್ಲಿ ಎಂಜಿನ್‌ ಮತ್ತು ಎರಡೂ ಬದಿಗಳಲ್ಲಿ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳನ್ನು ಒಳಗೊಂಡಿದೆ
* ಸಂಪೂರ್ಣ ಬುಕ್ಕಿಂಗ್‌ ಇಲ್ಲ, ಟಿಕೆಟ್‌ ಖರೀದಿಸಲು ಅವಕಾಶವಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments