ರಾಹುಲ್ ಗಾಂಧಿ ನಾಲಿಗೆಯನ್ನು ಕತ್ತರಿಸಿದವ್ರಿಗೆ 11 ಲಕ್ಷ ಬಹುಮಾನ ಘೋಷಿಸಿದ ಶಿವಸೇನಾ ಶಾಸಕ


ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi) ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ (Shiv Sena) ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿಯವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್ನ ನಿಜವಾದ ಮುಖವನ್ನು ತೆರೆದಿಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ಶಾಸಕರ ಈ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ (Maharashtra) ಬಿಜೆಪಿ (BJP) ಅಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಹೇಳಿದ್ದಾರೆ.
ಇತ್ತೀಚೆಗಷ್ಟೇ ಅಮೆರಿಕ ಪ್ರವಾಸದ ವೇಳೆ ರಾಹುಲ್ ಗಾಂಧಿ ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ್ದರು. ಈ ಬಗ್ಗೆ ತೀವ್ರ ವಾಗ್ದಳಿ ನಡೆಸಿರುವ ಅವರು, ಇದು ಮೀಸಲಾತಿಯನ್ನು ಅಂತರ್ಗತವಾಗಿ ವಿರೋಧಿಸುವ ಮನಸ್ಥಿತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಚುನಾವಣೆಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿತ್ತು ಎಂದು ಹೇಳಿದ್ದಾರೆ.




