ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಮದ್ಯದ ದರ ಮತ್ತೆ ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಪರಿಷ್ಕೃತ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಪರಿಷ್ಕೃತ ಮದ್ಯದ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈಗಾಗಲೇ ಒಂದು ವರ್ಷದಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರಕಾರ ಶಾಕ್ ನೀಡಲು ಮುಂದಾಗಿದೆ.
2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿದ್ದರಾಮಯ್ಯನವರು ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು. ಈಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರಕಾರ ಅಸ್ತು ಅಂದಿದ್ದು, ಅ.1 ರಿಂದ ಬೆಲೆ ಏರಿಕೆಯಾಗುವ ಸಾಧ್ಯತೆ. ಖಚಿತವಾದಂತಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರಕಾರ ಮುಂದಾಗಿದ್ದು, ಅ.1ರಿಂದ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆಯಿದೆ.ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿದೆ. ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ಸರಕಾರ ಸುಂಕ ಹೆಚ್ಚಳ ಮಾಡಿದರೆ ಗ್ರಾಹಕರ ಜೊತೆಗೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಸರಕಾರ ಏರಿಕೆ ಬದಲು ದರ ಇಳಿಕೆ ಬಗ್ಗೆ ಯೋಚನೆ ಮಾಡಿದರೆ ಹೆಚ್ಚು ಮಾರಾಟವಾಗಲಿದೆ. ಈ ಮೂಲಕ ಸರಕಾರ ಮತ್ತು ಮಾಲೀಕರಿಗೆ ಅನೂಕೂಲವಾಗಲಿದೆ ಎನ್ನುತ್ತಿದ್ದಾರೆ. ಇಷ್ಟೇ ಅಲ್ಲದೆ ಇನ್ನುಳಿದ ಬ್ರಾಂಡ್‌ಗಳ ಮೇಲೂ ಸುಮಾರು 10 ರಿಂದ 20 ರು. ವರೆಗೂ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರವೇ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.





