Top Newsಕ್ರೈಂ ಸ್ಟೋರಿಸುದ್ದಿ

ನಾಗಮಂಗಲ ಗಲಭೆ ಪ್ರಕರಣ​: ಬಂಧನ ಭೀತಿಯಲ್ಲಿ ಊರು ಬಿಟ್ಟಿದ್ದ ಯುವಕ ಸಾವು

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ. ಗಲಭೆಗೆ ಕಾರಣವಾದ ಬದ್ರಿಕೊಪ್ಪಲು ಗ್ರಾಮದ 13 ಮಂದಿ ಅರೆಸ್ಟ್ ಆಗಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬ್ರೈನ್ ಸ್ಟ್ರೋಕ್​ನಿಂದ ಕಿರಣ್(23) ಮೃತಪಟ್ಟಿದ್ದಾರೆ.

ಜಿಲ್ಲೆಯ ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದ ನಿವಾಸಿ ಕಿರಣ್​ ಸೆಪ್ಟೆಂಬರ್ 11ರ ರಾತ್ರಿ ಗಲಭೆ ನಂತರ ಗ್ರಾಮ ತೊರೆದಿದ್ದ. ಆದರೆ ನಿನ್ನೆ ಕಿರಣ್​ಗೆ ಬ್ರೈನ್ ಸ್ಟ್ರೋಕ್ ಆಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

Comments (0)

Your email address will not be published. Required fields are marked *

Back to top button