Top Newsಕ್ರೈಂ ಸ್ಟೋರಿಸುದ್ದಿ

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾಗಿರುವ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Comments (0)

Your email address will not be published. Required fields are marked *

Back to top button