#Exclusive NewsTop Newsಕ್ರಿಕೆಟ್ಫ್ರೀಡಂ ಟಿವಿ ವಿಶೇಷಮನರಂಜನೆವಿಶೇಷವೈರಲ್ ನ್ಯೂಸ್

ಭಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ  ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್‌ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ (113) ಶತಕ ಬಾರಿಸಿದರೆ, ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್ (56) ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ನಲ್ಲಿ 371 ರನ್ ಕಲೆಹಾಕಿ ಆಲೌಟ್ ಆಯಿತು.

ಇನ್ನು 227 ರನ್​ಗಳ ಪ್ರಥಮ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (119) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (109) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನಿಂದ ಭಾರತ ತಂಡವು 4 ವಿಕೆಟ್ ಕಳೆದುಕೊಂಡು 287 ರನ್​ ಗಳಿಸಿ ಡಿಕ್ಲೇರ್ ಘೋಷಿಸಿತು.

IND vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ

 

 

 

Comments (0)

Your email address will not be published. Required fields are marked *

Back to top button