#Exclusive NewsTop Newsಧರ್ಮಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವಿಶೇಷವೈರಲ್ ನ್ಯೂಸ್ಸುದ್ದಿ

ತಿರುಪತಿ ತಿಮ್ಮಪ್ಪನ ದೇವಸ್ಥಾನ ಸದ್ಯದಲ್ಲಿಯೆ ಶುದ್ದಿಕಕರಣ ಮಾಡಲಾಗುತ್ತದೆ:ಚಂದ್ರಬಾಬು ನಾಯ್ಡು

ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗಿ ವಿವಾದ ಸೃಷ್ಟಿಯಾಗಿರುವ ಕಾರಣ, ತಿರುಮಲ ವೆಂಕಟೇಶ್ವರ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.ಶನಿವಾರ ವಿವಾದದ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ನಾಯ್ಡು, ‘ಈಗ ಆಗಿರುವ ಅಪಚಾರವನ್ನು ಹೇಗೆ ಸರಿಪಡಿಸಬೇಕು ಎಂಬ ಬಗ್ಗೆ ನಾವು ಮಠಾಧೀಶರು, ಅರ್ಚಕರು ಮತ್ತು ಇತರ ಹಿಂದೂ ಧರ್ಮದ ಉನ್ನತ ಪಂಡಿತರೊಂದಿಗೆ ಸಮಾಲೋಚನೆ ಮಾಡುತ್ತೇವೆ. ಶುದ್ಧೀಕರಣ ಹೇಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸುತ್ತೇವೆ’ ಎಂದಿದ್ದಾರೆ.

ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು ಬಳಸಿದ ಆರೋಪ ಸುಳ್ಳು ಎಂದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಜಗನ್‌ ಅವಧಿಯಲ್ಲಿ ರಾಜ್ಯದ ಅನೇಕ ದೇವಾಲಯಗಳು ಅಪವಿತ್ರ ಆಗಿವೆ ಎಂಬ ದೂರುಗಳು ಬಂದಿದ್ದವು. ಪ್ರತಿ ಧರ್ಮಕ್ಕೂ ಅದರದ್ದೇ ಆದ ಪಾವಿತ್ರ್ಯವಿದೆ. ಅದನ್ನು ನಮ್ಮ ಸರ್ಕಾರ ಕಾಪಾಡಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಜಗನ್‌ ಅವಧಿಯಲ್ಲಿ ಕೇವಲ 320 ರು.ಗೆ ಲಡ್ಡುವಿಗೆ ತುಪ್ಪ ಖರೀದಿಸಲಾಗಿದೆ. ಇಷ್ಟು ಕಡಿಮೆ ದರಕ್ಕೆ ಹೇಗೆ ಖರೀದಿ ಸಾಧ್ಯ?’ ಎಂದಿರುವ ನಾಯ್ಡು, ‘ನಾನು ಅಧಿಕಾರಕ್ಕೆ ಬಂದ ಕೂಡಲೇ ತಿರುಮಲ ದೇವಾಲಯದಲ್ಲಿ ‘ಸ್ವಚ್ಛತಾ ಕೆಲಸ’ (ಅಕ್ರಮಗಳಿಗೆ ಬ್ರೇಕ್‌ ಹಾಕುವ ಕೆಲಸ) ಆರಂಭಿಸಿದೆ. ಕೆಲವು ಪೂರೈಕೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಲಡ್ಡು ಗುಣಮಟ್ಟ ಹೆಚ್ಚಿಸುವ ಕ್ರಮ ಆರಂಭಿಸಿದೆ. ಅದರ ಭಾಗವಾದ ಕರ್ನಾಟಕದ ನಂದಿನಿ ತುಪ್ಪ ಖರೀಸಿದಿದ್ದೇವೆ. ಟಿಟಿಡಿ ಹೊಸ ಸಿಇಒ ಇಂಥ ಅನೇಕ ಕ್ರಮ ಕೈಗೊಂಡರು. ಆದರೆ ಹೆಚ್ಚು ಪ್ರಚಾರ ಪಡೆಯದೇ ನಮ್ಮ ಕೆಲಸ ನಾವು ಮುಂದುವರಿಸಿದ್ದೆವು. ಆದರೆ ಈಗ ಲಡ್ಡು ಅಕ್ರಮದ ಬಗ್ಗೆ ದೇವರೇ ನನ್ನನ್ನು ಮಾತಾಡುವಂತೆ ಮಾಡಿದ’ ಎಂದು ವಿವರಿಸಿದ್ದಾರೆ.ಇದೇ ವೇಳೆ, ತಿರುಪತಿ ಲಡ್ಡುವಿನ ಶ್ರೇಷ್ಠತೆಯ ಬಗ್ಗೆ ಮಾತನಾಡಿರುವ ಅವರು, ‘ಲಡ್ಡುವಿಗೆ ಶತಮಾನದ ಇತಿಹಾಸವಿದೆ. ಅನೇಕ ಕಡೆ ಇದೇ ರೀತಿಯ ಲಡ್ಡು ತಯಾರಿಕೆ ಯತ್ನ ನಡೆದವು. ಆದರೆ ಆಗಲಿಲ್ಲ. ಅಯೋಧ್ಯೆಯಲ್ಲಿ ಕೂಡ ತಿರುಮಲದಿಂದಲೇ ಕೆಲಸಗಾರರನ್ನು ಕರೆದುಕೊಂಡು ಹೋಗಿ ಲಡ್ಡು ತಯಾರಿಕೆಗೆ ಯತ್ನಿಸಲಾಯಿತು. ಆದರೆ ಸಾಧ್ಯವಾಗಲಿಲ್ಲ. ಹೀಗೆಂದು ನನಗೆ ಅಯೋಧ್ಯೆಯ ಜನರೇ ಹೇಳಿದ್ದಾರೆ’ ಎಂದು ಹೇಳಿದ್ದಾರೆ.

Says Chandrababu Naidu; Archives - Kannada News | India News | Breaking news | Live news | Kannada | Kannada News | Karnataka News | Karnataka News

 

Comments (0)

Your email address will not be published. Required fields are marked *

Back to top button